ಒನಕೆ ಓಬವ್ವ


Contributors to Wikimedia projects

Article Images

ಒನಕೆ ಓಬವ್ವ

ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.

ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು.ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು.

ಒನಕೆ ಓಬವ್ವರ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದ್ದು. ಅವರನ್ನು ಕರ್ನಾಟಕದ ವೀರವನಿತೆಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಒನಕೆ ಓಬವ್ವ ಕ್ರೀಡಾಂಗಣ ಎಂದು ಅವರ ಹೆಸರನ್ನಿಟ್ಟು ಗೌರವಿಸಲಾಗಿದೆ. ಚಿತ್ರದುರ್ಗದ ಕೋಟೆಯಲ್ಲಿ ಓಬವ್ವ ಹೈದರಾಲಿಯ ಸೈನಿಕರನ್ನು ಸೋಲಿಸಿದ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತದೆ.

ಕನ್ನಡ ಚಿತ್ರರಂಗದಲ್ಲಿ ಓಬವ್ವ ಸ್ಮರಣೆ

ಬದಲಾಯಿಸಿ

ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿನ ಪ್ರಸಿದ್ಧ ಹಾಡಿನಲ್ಲಿ ಅವರ ವೀರೋಚಿತ ಪ್ರಯತ್ನವನ್ನು ಚಿತ್ರಿಸಲಾಗಿದೆ. ಈ ಚಿತ್ರದಲ್ಲಿ ನಟಿ ಜಯಂತಿ (ನಟಿ) ಅವರು ಓಬವ್ವನ ಪಾತ್ರ ಮಾಡಿದ್ದರು. ೨೦೧೯ರಲ್ಲಿ ಚಿತ್ರದುರ್ಗದ ಒನಕೆ ಓಬವ್ವ ಎನ್ನುವ ಸಿನಿಮಾದಲ್ಲಿ ತಾರಾ ಅನುರಾಧಾ ಅವರು ಒನಕೆ ಓಬವ್ವನಾಗಿ ಅಭಿನಯಿಸಿದ್ದಾರೆ.

ಕಿತ್ತೂರು ಚೆನ್ನಮ್ಮ ರಾಣಿ ಅಬ್ಬಕ್ಕ [[ವರ್ಗ:]]